Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comments
- BVK Photos : ಬಿವಿಕೆ ಚಿತ್ರಗಳು — 1 comments
Aug 18
[dropcap]ಕಾಂ[/dropcap]ಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಪರಿಣತ ತಜ್ಞರ ಚಿಕಿತ್ಸೆಯನ್ನು ಪಡೆಯುತ್ತಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ಅವರಲ್ಲಿ ಸದ್ಭಾವನೆಯುಳ್ಳವರೆಲ್ಲರೂ ಅವರು ಶೀಘ್ರ ಗುಣಮುಖರಾಗಲಿ ಎಂಬ ಕಳಕಳಿಯನ್ನು ಹೊಂದಿರುವುದೂ ಪ್ರಕಟವಾಗಿದೆ. ಅದು ಸಹಜವೂ ಹೌದು. ಅಮೆರಿಕಾದ ತಜ್ಞ ವೈದ್ಯರು ಸೂಕ್ತ ಚಿಕಿತ್ಸೆಯನ್ನು ನೀಡುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರಾಗಲಿ, ಚಿಕಿತ್ಸೆಯನ್ನು ನೀಡುವ ವೈದ್ಯರಾಗಲಿ ಯಾವುದೇ ದೇವಾಲಯಗಳಲ್ಲಿ, ಇಗರ್ಜಿ, ಮಸೀದಿಗಳಲ್ಲಿ ಯಾವುದೇ ತರದ ಹರಕೆಯನ್ನಾಗಲೀ ಪ್ರಾರ್ಥನೆಯನ್ನಾಗಲೀ ಮಾಡಿಕೊಂಡ ವರದಿ ಪ್ರಕಟವಾಗಲಿಲ್ಲ. ವೈದ್ಯರು ವೈಜ್ಞಾನಿಕ ಚಿಕಿತ್ಸಾ ಕ್ರಮಗಳನ್ನು ಮಾತ್ರ …
Aug 18
[dropcap]ಮಾ[/dropcap]ನವ ಹಕ್ಕುಗಳ ಹೋರಾಟಗಾರ ಡಾ. ಬಿನಾಯಕ್‌ಸೇನ್ ಅವರಿಗೆ ಚತ್ತೀಸ್‌ಘಡ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದುದಕ್ಕೆ ವಿರುದ್ದವಾಗಿ ದೇಶದಾದ್ಯಂತ ಖಂಡನೆಗಳು ವ್ಯಕ್ತವಾಗಿವೆ. ಈ ಶಿಕ್ಷೆಯ ವಿರುದ್ಧ ಅವರ ಮೇಲ್ಮನವಿಯನ್ನು ಉಚ್ಛ ನ್ಯಾಯಾಲಯವೂ ತಿರಸ್ಕರಿಸಿತ್ತು. ಆ ಬಗ್ಗೆ ಸರ್ವೋಚ್ಛ ನ್ಯಾಯಾಲಯಕ್ಕೆ ಅವರು ನೀಡಿದ್ದ ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡು ಅವರಿಗೆ ಜಾಮೀನು ನೀಡಿದೆ ಮಾತ್ರವಲ್ಲದೆ ಅವರು ಯಾವುದೇ ದೇಶದ್ರೋಹದ ಕೆಲಸವನ್ನು ಮಾಡಿರುವುದು ತೋರುವುದಿಲ್ಲ ಎಂದು ಪರಿಗಣಿಸಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಆಜ್ಞಾಪಿಸಿರುವುದು ಮಾನವ ಹಕ್ಕುಗಳ ಹೋರಾಟಗಾರರೆಲ್ಲರ ಪ್ರಶಂಸೆಗೆ …
Aug 17
[dropcap]ಬೆಂ[/dropcap]ಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯೊಳಗೆ ಮಾನವರಿಗಿಲ್ಲದ ರಕ್ಷಣೆಯನ್ನು ಬೀದಿ ನಾಯಿಗಳಿಗೆ ಪ್ರಾಣಿದಯೆಯ ಹೆಸರಲ್ಲಿ ನಗರಾಡಳಿತವು ನೀಡುತ್ತಿರುವುದು ಕೂಲಿನಾಲಿ ಮಾಡಿಕೊಂಡು ಬದುಕುತ್ತಿರುವ ಕಡು ಬಡವರ ಪಾಲಿಗೆ ಮಾರಕವಾಗಿದೆ. ಇವರ ಮಕ್ಕಳಿಗೆ ಯಾರ ದಯೆಯೂ ಇಲ್ಲ, ಯಾರ ರಕ್ಷಣೆಯೂ ಇಲ್ಲ, ಯಾರ ಪೋಷಣೆಯೂ ಇಲ್ಲ ಎಂದಾಗಿರುವುದು ಆಡಳಿತದ ಧೋರಣೆಯ ಪರಿಣಾಮವಾಗಿದೆ. ಹಳ್ಳಿಗಾಡುಗಳಿಂದ ಹೊಟ್ಟೆಹೊರೆಯಲು ನಗರ ವ್ಯಾಪ್ತಿಯೊಳಗೆ ಬಂದು ಕೂಲಿ ನಾಲಿಯ ಕೆಲಸ ಮಾಡಿಕೊಂಡು ಅಂಗಡಿ ಮುಂಗ್ಗಟ್ಟುಗಳಲ್ಲಿಯೋ ರಸ್ತೆ ಬದಿಗಳಲ್ಲಿಯೋ ಅರೆ ಬರೆ ನಿರ್ಮಾಣವಾಗಿರುವ ಕಟ್ಟಡಗಳ ಇಟ್ಟಿಗೆ ರಾಶಿಗಳೊಳಗೋ ಆಶ್ರಯ ಪಡೆಯುವ …